ಉಡುಪಿ: ಪರಿಸರ ದಿನಾಚರಣೆಯ ಪ್ರಯುಕ್ತ ನಿಟ್ಟೂರಿನ ಹನುಮಂತ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೌರಾಯುಕ್ತ ರಾಯಪ್ಪ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಅರಿವು ಮೂಡಿಸಿದರು.  ಹಾಗೇನೇ ನಿಟ್ಟೂರಿನ ಹನುಮಂತ ನಗರದ ಅಂಗನವಾಡಿಯಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ನಗರಸಭಾ ಸದಸ್ಯ ಸಂತೋಷ್ ಜತ್ತನ್ನ, ನಗರಸಭೆಯ ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಸೂಪರ್ ವೈಸರ್‍ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.