ಉಡುಪಿ, ಜುಲೈ 02: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ 5 ಗ್ರಾಮಗಳಾದ ಕೋಟತಟ್ಟು, ಕಿರಿಮಂಜೇಶ್ವರ, ಮಜೂರು, ನಿಟ್ಟೆ ಹಾಗೂ ಉಪ್ಪೂರು ಗ್ರಾಮಗಳನ್ನು ಆಯ್ಕೆ ಮಾಡಿಲಾಗಿದ್ದು, ಈ ಗ್ರಾಮಗಳಲ್ಲಿ ಸೋಲಾರ್ ಅಳವಡಿಕೆಯ ಬಗ್ಗೆ ಜುಲೈ 1 ರಿಂದ ಡಿಸೆಂಬರ್ ಅಂತ್ಯದ ವರೆಗೆ ಸ್ಪರ್ಧೆಗಳು ನಡೆಸಲು ಜಿಲ್ಲಾ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೆಸ್ಕಾಂ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
