ಉಡುಪಿ: ಬೈಂದೂರು ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಗೆ ಉಪಚುನಾವಣೆ ನಡೆಯಲಿದ್ದು ಆದಿತ್ಯವಾರ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡು ಅಭ್ಯರ್ಥಿ ಪರ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ್ ಪೂಜಾರಿ, ವಿಧಾನ ಪರಿಷತ್ ಉಪಚನಾವಣೆಯ ಅಭ್ಯರ್ಥಿ ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.