ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು, ಕಾಪು ತಾಲೂಕು ಆಡಳಿತ ಕಚೇರಿ ಆವರಣದ ಎದುರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಸಿ.ಇ.ಓ ಪ್ರತೀಕ್ ಬಾಯಲ್, ತಹಶೀಲ್ದಾರ್ ಪ್ರತಿಭಾ, ಎಂ.ಎ. ಗಫೂರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.