ಉಡುಪಿ, ಸೆ. 24: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ವಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ (ಆಂಗ್ಲಮಾಧ್ಯಮ) ಯಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ಶಿಕ್ಷಕರ ನೇಮಕಾತಿಗೆ ಬಿ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಹಾಗೂ ಗಣಿತ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ., ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಅಕ್ಟೋಬರ್ 1 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾರ್ಕಳ, ಮಿಯ್ಯಾರು, ಮೊ.ನಂ: 7892963482 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.