ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವು ಜುಲೈ 10 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಟಿ.ಎಂ.ಎ ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಲೇಜಿನ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಲಿದ್ದಾರೆ.