ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಜೂನ್ 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಒಕ್ಕಲಿಗ (ಗೌಡ) ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ ಎ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಹಾಗೂ ಮತ್ತಿತರು ಭಾಗವಹಿಸಲಿದ್ದು, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಉಪನ್ಯಾಸ ನೀಡಲಿದ್ದಾರೆ.