ಉಡುಪಿ: ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ 2023-24 ನೇ ಸಾಲಿನ ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಹೊಸ ಲಸಿಕಾ ಉಗ್ರಣ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸವನ್ನು ಇಂದು ಡಿ. ಹೆಚ್. ಓ ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಗ್ಯಾರಂಟಿ ಯೋಜನಾ ಸಮತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಡಿ. ಹೆಚ್. ಓ ಡಾ. ಬಸವರಾಜ್ ಹುಬ್ಬಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.