ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವು ಸೆಪ್ಟಂಬರ್ 28 ಮತ್ತು 29 ರಂದು ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿವೆ. 

ಸೆ. 28 ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವುಷು, ವೇಟ್‍ಲಿಫ್ಟಿಂಗ್, ಕುಸ್ತಿ, ಥ್ರೋಬಾಲ್, ಬಾಲ್‍ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ-ಖೋ ಹಾಗೂ ನೆಟ್‍ಬಾಲ್ ಕ್ರೀಡಾಕೂಟ, ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್‍ಬಾಲ್ ಹಾಗೂ ಹ್ಯಾಂಡ್‍ಬಾಲ್ ಕ್ರೀಡಾಕೂಟ, ಕೂಡಿಗೆ ಕ್ರೀಡಾಶಾಲೆಯಲ್ಲಿ ಹಾಕಿ, ಯೋಗ ಹಾಗೂ ಜಿಮ್ನಾಸ್ಟಿಕ್ಸ್ ಕ್ರೀಡಾಕೂಟ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಹಾಗೂ ಉಡುಪಿಯ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8 ಗಂಟೆಗೆ ವಾಲಿಬಾಲ್, ಕಬಡ್ಡಿ ಟಿ.ಟಿ, ಟೆನ್ನಿಸ್ ಹಾಗೂ ಈಜು ಕ್ರೀಡಾಕೂಟ ಮತ್ತು ಸೆ. 29 ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಬಾಸ್ಕೆಟ್‍ಬಾಲ್ ಕ್ರೀಡಾಕೂಟ ನಡೆಯಲಿದೆ. 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ, ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.