ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‍ಗಳಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ, ರೋಸ್ಟರ್ / ಮೆರಿಟ್ ಆಧಾರದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಕಾಯ್ದಿರಿಸಿರುವ ಪಟ್ಟಿಯನ್ನು ವೆಬ್‍ಸೈಟ್ uಜuಠಿi.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಉಡುಪಿ ಇವರಿಗೆ ಜುಲೈ 7 ರ ಸಂಜೆ 4 ಗಂಟೆಯ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.