ಉಡುಪಿ: ರಾಜ್ಯದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣಕ್ಕಾಗಿ ಪಾರದರ್ಶಕ, ಮೌಲ್ಯಾಧಾರಿತ ಮತ್ತು ವೈಯಕ್ತಿಕಗೊಳಿಸಿದ ಮಾರ್ಗದರ್ಶನವನ್ನು ನೀಡುವ ಮೂಲಕ ಜಾಗತಿಕ ಶಿಕ್ಷಣದ ಪ್ರಯಾಣವನ್ನು ಸರಳೀಕರಿಸಲು ಮತ್ತು ಸುರಕ್ಷಿತಗೊಳಿಸಲು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ "ವಿದೇಶದಲ್ಲಿ ಅಧ್ಯಯನ- 2025" ಕಾರ್ಯಕ್ರಮವನ್ನು ಆಗಸ್ಟ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರ ವರೆಗೆ ಬೆಂಗಳೂರಿನ "ಲಲಿತ್ ಅಶೋಕ್ ಹೋಟೆಲ್"ನಲ್ಲಿ ನಡೆಯಲಿದೆ.
ಕಾರ್ಯಕ್ರಮಲ್ಲಿ 10 ಕ್ಕೂ ಹೆಚ್ಚು ರಾಷ್ಟ್ರಗಳ, 50 ಕ್ಕೂ ಮೇಲ್ಪಟ್ಟ ಜಾಗತಿಕ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಪದವಿ, ಸ್ನಾತಕೋತ್ತರ, ಡಿಪ್ಲೋಮ ಹಾಗೂ ವೃತ್ತಿಪರ ಕೋರ್ಸ್‍ಗಳನ್ನು ಮುಂದುವರೆಸಲು ಆಸಕ್ತಿಯುಳ್ಳವರು ಬೆಂಗಳೂರಿನಲ್ಲಿ ನಡೆಯುವ “ವಿದೇಶದಲ್ಲಿ ಅಧ್ಯಯನ- 2025" ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಜಿಲ್ಲೆಯಾದ್ಯಂತ ಅರ್ಹ ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 16 ರ ಒಳಗಾಗಿ ಲಿಂಕ್ https://studyabroad.ksdckarnataka.com/ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.