ಉಡುಪಿ: ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂಬ ಯುವಕನು ಜೂನ್ 1 ರಂದು ಬೆಳಗ್ಗೆ 9.30 ರ ಸುಮಾರಿಗೆ ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ದೃಢಕಾಯ ಶರಿರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.