ಉಡುಪಿ:  ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ನವೆಂಬರ್ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9.30 ಕ್ಕೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ, 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3 ಗಂಟೆಗೆ ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.