ಉಡುಪಿ ಜೂನ್ 18:  ಕೋವಿಡ್ -19 ನಿಯಂತ್ರಣ ಕುರಿತು ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿ0ದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತವೆ. ಸದರಿ ಅವಧಿಯಲ್ಲಿ ಈ ಕೆಳಕಂಡ ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ, ಎಲ್ಲಾ ವೈದ್ಯಕೀಯ ಸೇವೆಗಳು ( ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್ಸ್ , ಕ್ಲಿನಿಕಲ್ ಲ್ಯಾಬ್ಸ್  ಔಷಧಾಲಯಗಳು, ಜನ ಔಷಧಿ ಕೇಂದ್ರಗಳು, ರಕ್ತ ಸಂಗ್ರಹ ಕೇಂದ್ರಗಳು, ರೋಗಿಗಳು ಮತ್ತು ಅವರ ಪರಿಚಾರಕರು ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರು), ಅವಶ್ಯಕ ಸೇವೆಗಳನ್ನು ಪೂರೈಸುವ (emergency and essential services) ಮತ್ತು 24/7 ಸಮಯಾವಧಿಯಲ್ಲಿ ಕಾರ್ಯಚರಿಸ ಬೇಕಾಗಿರುವ ಕೈಗಾರಿಕೆಗಳು / ಕಂಪನಿಗಳು / ಕೈಗಾರಿಕಾ ಸಂಸ್ಥೆಗಳು ಕಾರ್ಯಾನಿರ್ವಹಿಸಲು  ಅನುಮತಿ ನೀಡಲಾಗಿದೆ,  ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳು ಕಾರ್ಯಚರಿಸಲು ಅನುಮತಿಸಲಾಗಿದೆ, ರೆಸ್ಟೋರೆಂಟ್ ಗಳಲ್ಲಿ ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿ ಅವಕಾಶವಿದೆ,

 ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ, ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ,  ಸಾರ್ವಜನಿಕ ವಿತರಣಾ ವ್ಯವಸ್ಥೆ(ಫಿಡಿಎಸ್)ಯ ಅಂಗಡಿಗಳಿಗೆ ಅವಕಾಶವಿದೆ ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6 ರಿಂದ ಅಪರಾಹ್ನ 2 ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ,  ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ತಹಶೀಲ್ದಾರ್ ರಿಂದ ಅನುಮತಿಯನ್ನು ಪಡೆಯಲಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬAಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಮಾಡುವುದು,  ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.