ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ದ ಆರೋಪಿ ,ಪ್ರವೀಣ್ ಅರುಣ್ ಚೌಗುಲೆ (39) ಗೆ ಗಗನಸಖಿ ಐನಾಜ್ ಮೇಲಿನ ಅಸೂಯೆ ಮತ್ತು ದ್ವೇಷವೇ ಈ ಕೊಲೆಗೆ ಕಾರಣ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ ತಿಳಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ನವೆಂಬರ್ 14 ರಂದು ಬೆಳಗಾವಿ ಜಿಲ್ಲೆಯ ರಾಯಭಾಗ್ ತಾಲೂಕಿನ ಕುಡಚಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ನಂತರ ನವೆಂಬರ್ 15 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಲಯವು ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ವಿಧಿಸಿದೆ. ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಈತ ಕೊಲೆಗೆ ಎರಡು, ಮೂರೂ ಕಾರಣಗಳನ್ನು ತಿಳಿಸಿದ್ದು, ಐನಾಜ್ ಳನ್ನು ಅತೀಯಾಗಿ ಪ್ರೀತಿಸುತ್ತಿದ್ದು ಆಕೆ ತನ್ನ ನಿಯಂತ್ರಣದಲ್ಲಿ ಇರಬೇಕೆಂಬ ಕಾರಣದಿಂದ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಪೊಲೀಸರು ಇನ್ನಷ್ಟು ಮಾಹಿತಿಗಳನ್ನು ಪಡೆಯುವಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.