ಉಡುಪಿ  : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಮಂಡಳಿ ವತಿಯಿಂದ ಕೈಗೊಳ್ಳುವ ಸಲುವಾಗಿ 1 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳ ಮಾಹಿತಿಯನ್ನು ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗೆ ಆಗಸ್ಟ್ 3 ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.