ಉಡುಪಿ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸಕ್ತ ಸಾಲಿನಲ್ಲಿ ಬೀಡಿ ಕಾರ್ಮಿಕರ ಮಕ್ಕಳಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್ https://frims.kar.nic.in/dieselpermit ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಹಾಗೂ 11 ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.