ಮಂಗಳೂರಿನ ಉರ್ವಸ್ಟೋರ್‍ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆವರಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಇದರ ಅನುದಾನದಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೋಮವಾರ ನೆರವೇರಿತು.

ಶಿಲಾನ್ಯಾಸ ನೆರವೇರಿಸಿದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ಕೇಂದ್ರೀಕರಿಸಿ ಬಯಲು ರಂಗ ಮಂದಿರ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಹಲವು ಸಮಯಗಳಿಂದಿತ್ತು. ಇದೀಗ ರೂ.25.00 ಲಕ್ಷ ವೆಚ್ಚದಲ್ಲಿ ನಿರ್ಮಾಣಕ್ಕೆ ಮುಂದಾಗಿದ್ದು, ಶಂಕುಸ್ಥಾಪನೆ ನೆರವೇರಿಸಲಾಗಿದೆ.  ಕಲಾವಿದರ ಪ್ರತಿಭೆ ಬೆಳಗಿಸಲು ಇದರಿಂದ ಅವಕಾಶ ಸಿಗುತ್ತದೆ. ಕಟ್ಟಡದ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ರವರು ಪ್ರಸ್ತಾವನೆಗೈದು ಸ್ವಾಗತಿಸಿದರು. ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಶುಭಹಾರೈಸಿದರು. ಸದಸ್ಯರುಗಳಾದ ಲೀಲಾಕ್ಷ ಕರ್ಕೇರ, ನರೇಂದ್ರ ಕೆರೆಕಾಡು, ನಾಗೇಶ್ ಕುಲಾಲ್, ರವೀಂದ್ರ ಶೆಟ್ಟಿ ಬಳಂಜ, ಚೇತಕ್ ಪೂಜಾರಿ, ಸಿದ್ಧಕಟ್ಟೆ ಮಲ್ಲಿಕಾ ಶೆಟ್ಟಿ,  ರಿಜಿಸ್ಟ್ರಾರ್ ಕವಿತಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ  ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಮನಪಾ ಸದಸ್ಯರಾದ ಗಣೇಶ್ ಕುಲಾಲ್, ಜಯಲಕ್ಷ್ಮೀ ಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ತುಳು ಅಕಾಡೆಮಿ ಮಾಜಿ ಸದಸ್ಯರಾದ ವಿ.ಜಿ ಪಾಲ್ ಮತ್ತು ಪ್ರಾಧಿಕಾರದ ಸಾರ್ವಜನಿಕ ಸಂಪರ್ಕಾಧಿಕಾರಿ ಪವನ್ ಶೆಟ್ಟಿ ಮತ್ತಿತರರಿದ್ದರು.