ಮಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಬೀಬುಲ್ಲಾ ಕಣ್ಣೂರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ, ಸಂಸದರಾದ ಇಮ್ರಾನ್ ಪ್ರತಾಪಗಿರಿ ನಿರ್ದೇಶನದಂತೆ ಮಾಜಿ ಶಾಸಕರಾದ ಐವನ್ ಡಿಸೋಜರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ ಅಬ್ದುಲ್ ಜಬ್ಬಾರ್ ರವರು, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಬೀಬುಲ್ಲಾ ಕಣ್ಣೂರ್ ರವರನ್ನು ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಇವರು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.