ಮಂಗಳೂರು:- ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸ್ವಾವಲಂಭಿ ಭಾರತ-ಅಂಬೇಡ್ಕರ್ ಚಿಂತನೆ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಿನಾಂಕ 07.12.2020ರಂದು ಪೂರ್ವಾಹ್ನ 10.30ಕ್ಕೆ ನಡೆಸಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲುರವರು ನಡೆಸಲಿದ್ದು, ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಪ್ರೊ ಪಿ.ಎಸ್.ಯಡಪಡಿತ್ತಾಯರವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಬಿ.ವಿ.ವಸಂತ ಕುಮಾರ್‌ರವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಕಾರ್ಯಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಅದರ ಮೂಲಕ ಸಾಧ್ಯವಾಗಬೇಕಾದ ಕೌಶಲ್ಯಾಭಿವೃದ್ಧಿ, ಆತ್ಮನಿರ್ಭರ ಭಾರತ, ವಾಲ್ ಆಫ್ ಕೈಂಡ್‌ನೆಸ್ ಇತ್ಯಾದಿ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಡಿ. ವೇದವ್ಯಾಸ ಕಾಮತ್, ಶ್ರೀ ಯು.ಟಿ. ಖಾದರ್, ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಶ್ರೀ ದಿವಾಕರ, ಹಾಗೂ ಸದಸ್ಯರಾದ ಶ್ರೀ ಎ.ಸಿ. ವಿನಯರಾಜ್ ಪಾಲ್ಗೊಳ್ಳಲಿದ್ದಾರೆ.