ಮಂಗಳೂರು:- ಡಿಸೆಂಬರ್ 10 ರ ಗುರುವಾರ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ 2018, 2019 ಮತ್ತು 2020ರ ಸಾಲಿನ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ ಮತ್ತು ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮವು ಸಂಜೆ ಐದು ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಿಟಿ ರವಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಪುರಸ್ಕಾರ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಇವರು ಲಿಪಿ ಸಂಶೋಧನಾ ಸದಸ್ಯರಿಗೆ ಗೌರವ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್. ರಂಗಪ್ಪ ಇವರು ‘ಪದ್ಮಶ್ರೀ’ ಹರೇಕಳ ಹಾಜಬ್ಬರಿಗೆ ಅಭಿನಂದನೆ ಮಾಡಲಿದ್ದಾರೆ. ಶಾಸಕರಾದ ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಕಿರುತೆರೆ ಚಲನಚಿತ್ರ ನಟಿ ಮತ್ತು ಯುವ ಜಾಗೃತಿ ಬಳಗದ ಅಧ್ಯಕ್ಷೆ ಕುಮಾರಿ ಪ್ರಾಚೀ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಪರಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಬ್ಯಾರಿ ಸಂಗೀತ ಕಾರ್ಯಕ್ರಮ ಹಾಗೂ ಸಂಜೆ 6 ಗಂಟೆಯಿಂದ 9ರ ತನಕ ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.