ಉಡುಪಿ: ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆತಿಥ್ಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಇವರ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಕುಸ್ತಿ ಸ್ಪರ್ಧೆಯು ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ ಡಿ ಎಮ್ ಸಿ ಗೌರವಾಧ್ಯಕ್ಷೆ ತಾರಾದೇವಿ, ಕಾಪು ವಲಯದ ಯುವಜನ ಮತ್ತು ಕ್ರೀಡಾ ಇಲಾಖೆಯ ರಿತೇಶ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ವರದರಾಜ ನಾಯಕ್ ಅತಿಥಿಗಳಾಗಿ ರಾಷ್ಟ್ರಮಟ್ಟದ ತೀರ್ಪುಗಾರರಾದ ಬಾಹುಬಲಿ ಭಾಗವಹಿಸಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಬಿ. ಸ್ವಾಗತಿಸಿದರು, ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ, ವಸಂತ ಜೋಗಿ ಧನ್ಯವಾದಗೈದರು