ವರದಿ ರಾಯಿ ರಾಜ ಕುಮಾರ
ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸಭೆ ನವೆಂಬರ್ 12 ರಂದು ನಡೆಯಿತು. ಸಮುದಾಯ ಆರೋಗ್ಯ ಕೇಂದ್ರದ ವ್ಯವಸ್ಥೆಗಳನ್ನು ಸುಧಾರಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಆರೋಗ್ಯ ಕೇಂದ್ರದ ಅಧಿಕಾರಿಗಳೊಂದಿಗೆ, ಡಾಕ್ಟರ್ಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ದಾಖಲಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಸರಕಾರದಿಂದ, ಆರೋಗ್ಯ ಇಲಾಖೆಯಿಂದ ಕೊಡ ಮಾಡುವ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆಯನ್ನು ಇತ್ತರು.