ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಸ್ಥಳೀಯ ಮೂಡುಬಿದಿರೆ ಮೈನ್ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 10 ರಂದು ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿಯನ್ನು ಉದ್ಘಾಟಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರಕಾರ ಸೌಲಭ್ಯಗಳನ್ನು ಒದಗಿಸಿದೆ. ಶಿಕ್ಷಕರೂ ಮುತುವರ್ಜಿಯಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಮೂಡಿಸಲು ಪ್ರಯತ್ನಿಸಲು ಕೇಳಿಕೊಂಡರು.