ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಪ್ರಪಂಚದಾದ್ಯಂತ ಎಲ್ಲರಿಂದಲೂ ಪೂಜಿಸಲ್ಪಡುವ ಗಣಪತಿಯ ನಾಮಧೇಯಗಳು ಅಸಂಖ್ಯಾತ. ಎಲ್ಲಿಗೆ ಹೋದರು ಆತನ ವೈವಿಧ್ಯಮಯವಾದ ರೂಪ, ಆಕಾರ, ಎಲ್ಲರನ್ನೂ ಆಕರ್ಷಿಸುವಂತದ್ದು.
ಅಂತಹ ವಿಘ್ನ ನಿವಾರಕ ನಮ್ಮೆಲ್ಲರ ಇಷ್ಟಾರ್ಥಗಳನ್ನು ಪೂರೈಸಿ ಬದುಕಿಗೆ ಶುಭವನ್ನು ಉಂಟು ಮಾಡಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ನುಡಿದರು.
ಅವರು ಆಗಸ್ಟ್ 27ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ 62ನೇ ವರ್ಷದ ಗಣೇಶೋತ್ಸವ ಸಮಾರಂಭವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು. ಸಮಿತಿಯ ಅಧ್ಯಕ್ಷ ನಾರಾಯಣ ಪಿ ಎಂ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಅಧ್ಯಕ್ಷ ಶ್ರೀಪತಿ ಭಟ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಮ್ ಸ್ವಾಗತಿಸಿದರು. ಉಪಾಧ್ಯಕ್ಷ ರಾಜಾರಾಮ್ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಚೇತನ್ ಕುಮಾರ್ ಶೆಟ್ಟಿ ವಂದಿಸಿದರು.