ಮಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಅಕ್ಟೋಬರ್ ನಲ್ಲಿ ನಡೆದ ಡಿ.ಇಎಲ್.ಇಡಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ಸೈಂಟ್ ಆನ್ಸ್ ಶಿಕ್ಷಕಿ ತರಬೇತಿ ಸಂಸ್ಥೆಯ ದ್ಟಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ವೆರೋನಿಕ ಎ. ಒಟ್ಟು ಅಂಕ 800 ರಲ್ಲಿ 750 (93.75%) ಅಂಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ, ಹಾಗೂ ಸಿಲ್ಟಿಯಾ 730 (91.25%) ಹಾಗೂ ವಿಯೋಲಾ 726 (90.75%) ಅಂಕಗಳನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಭಗಿನಿ. ಪ್ರಮೀಳಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೆರೋನಿಕ ಎ.(93.75%) ಸಿಲ್ಟಿಯಾ (91.25%) ವಿಯೋಲಾ (90.75%)