ಅಬ್ದುಲ್ ಅಝೀಜ್(34)
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ದಿನಾಂಕ 01.08.2023 ರಂದು ವಾಹನ ತಪಾಸಣೆ ನಡೆಸುತ್ತಿದ್ದ ಸಮಯ 3.15 ಗಂಟೆಗೆ ನಂಬರ್ ಫ್ಲೇಟ್ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರನ್ನು ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕನು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದು, ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿ ಕಾರಿನ ಸವಾರ ಅಬ್ದುಲ್ ಅಝೀಜ್(34) ಎಂಬಾತನು ಅಕ್ರಮವಾಗಿ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಚರಸ್ ಅನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟು ಸಾಗಿಸುತ್ತಿರುವುದು ಕಂಡುಬಂದಿರುತ್ತದೆ. ಕಾರು ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಕಾರಿನಲ್ಲಿದ್ದ ಇನ್ನಿತರ ಆರೋಪಿತರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಪ್ರಕರಣದಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, IPS ರವರ ಮಾರ್ಗದರ್ಶನದಂತೆ, ಮಾನ್ಯ DCP ಯವರಾದ ಅಂಶು ಕುಮಾರ್ (ಕಾ&ಸು) ದಿನೇಶ್ ಕುಮಾರ್ DCP (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತ್ರತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.