ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಎ.ಪಿ.ಎಲ್, ಬಿ.ಪಿ.ಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಾದ ಮನೆಯ ಯಜಮಾನಿ ಇವರು ಉಡುಪಿ ನಗರಸಭಾ ಕಚೇರಿ, ಮಣಿಪಾಲ, ಹೆರ್ಗಾ, ಮಲ್ಪೆ ಮತ್ತು ಪುತ್ತೂರು ಉಪ ಕಚೇರಿಗಳಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮೊಬೈಲ್ ನೊಂದಿಗೆ ತೆರಳಿ ಬೆಳಗ್ಗೆ 9 ರಿಂದ ಸಂಜೆ 8 ರ ವರೆಗೆ ನೊಂದಾವಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು,
ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹಾಗೂ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.