ಉಡುಪಿ, ಜನವರಿ 12: ಯುವ ಜನತೆ ವಿವೇಕಾನಂದರ ಚಿಂತನೆಗಳಿAದ ಪೇರಿತರಾಗಿ ಸ್ಫೂರ್ತಿ ಪಡೆದು ನಾಗರೀಕ ಸೇವಾ ವಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ  ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ  ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆ, ಯುವ ಸ್ಪಂದನ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು (ಲೀಡ್ ಕಾಲೇಜು), ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಪೂರ್ಣಪ್ರಜ್ಞ ಕಾಲೇಜು, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ, ಸೈಂಟ್ ಮೇರಿಸ್ ಕಾಲೇಜು ಶಿರ್ವ ಹಾಗೂ ಮಾಧವ ಪೈ ಮೆಮೋರಿಯಲ್ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಆಜಾದ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜಿಲ್ಲೆಯ ಯುವ ಜನತೆ ಬುದ್ಧಿವಂತರಾಗಿದ್ದರೂ ಸಹ ನಾಗರೀಕ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿಲ್ಲ. ಯುವ ಜನತೆಗೆ ನಾಗರೀಕ ಸೇವಾ ಪರೀಕ್ಷೆ ಕುರಿತಂತೆ ಜಿಲ್ಲಾಡಳಿತದ ಮೂಲಕ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಂಡು, ನಾಗರೀಕ ಸೇವೆಯ ಮೂಲಕ ವಿವೇಕಾನಂದರ ಆಶಯದಂತೆ ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ  ತಮ್ಮ ಕೊಡುಗೆ ನೀಡಬೇಕು ಎಂದು ರಘುಪತಿ ಭಟ್ ಹೇಳಿದರು.

     ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ತಾನು ನಾಗರೀಕ ಸೇವಾ ಪರೀಕ್ಷೆ ಎದುರಿಸಲು ವಿವೇಕಾನಂದರ ಚಿಂತನೆಗಳೇ ಪ್ರೇರಣೆ. ವಿವೇಕಾನಂದರ ನಿನ್ನನ್ನು ನೀನು ನಂಬು ಹಾಗೂ ಎದ್ದೇಳು ಗುರಿ ಮುಟ್ಟುವವರೆಗೆ ನಿಲ್ಲದಿರು ಎಂಬ ಸ್ಫೂರ್ತಿದಾಯಕ ಆದರ್ಶದ ಮಾತುಗಳು ಸರ್ವಕಾಲಕ್ಕೂ ಸಮ್ಮತವಾಗಿವೆ. ಜಿಲ್ಲೆಯ ಯುವಜನತೆಯು ಜಿಲ್ಲಾಡಳಿತದ ಎಲ್ಲಾ ಕಾರ್ಯಗಳಿಗೆ ಉತ್ತಮ ಸಹಕಾರ ನೀಡುತ್ತಿದ್ದು, ಕ್ಲೀನ್ ಇಂಡಿಯಾ ಮತ್ತು ಫಿಟ್ ಇಂಡಿಯಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದ್ದಾರೆ. ಜಿಲ್ಲಾಡಳಿತ ಕೂಡಾ ಜಿಲ್ಲೆಯ ಯುವ ಜನತೆಗೆ ನಾಗರೀಕ ಸೇವಾ ಪರೀಕ್ಷೆಗೆ ಉಚಿತ ತರಬೇತಿ ಆಯೋಜಸಿದ್ದು, ಇತ್ತೀಚೆಗೆ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 500 ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗ ದೊರಕಿಸಲಾಗಿದೆ. ಕೋವಿಡ್-19 ಎದುರಿಸಲು ಯುವ ಜನತೆಯ ಸಹಕಾರ ಅಗತ್ಯವಾಗಿದ್ದು, ಎಲ್ಲಾ ಯುವ ಜನರು 100% 2 ಡೋಸ್ ಕೋವಿಡ್ ಲಸಿಕೆ ಪಡೆಯಬೇಕು ಎಂದರು.

     ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿಯಾಗಬೇಕು ಎಂದರು.

     ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ, ವಿವೇಕಾನಂದ ಅವರು ರಾಷ್ಟçದ ಯುವಜನತೆಯ ಐಕಾನ್ ಆಗಿದ್ದಾರೆ. ದೇಶದ ಒಟ್ಟು ಜನಸಂಖ್ಯೆಯ 62.5% ರಷ್ಟಿರುವ ಯುವ ಜನತೆ, ವಿವೇಕಾನಂದರ ಆಶಯದಂತೆ  ವೈಚಾರಿಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಂಡು, ದೇಶದ ಬಗ್ಗೆ ಚಿಂತನೆ ನಡೆಸಿದ್ದಲ್ಲಿ ಸಮೃದ್ಧ, ಸದೃಢ, ಸಶಕ್ತ ಭಾರತ ನಿರ್ಮಾಣ ಸಾಧ್ಯವಾಗಲಿದೆ ಎಂದರು.

   ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

   ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಫೆçಡ್ ಡಿಸೋಜಾ ಸ್ವಾಗತಿಸಿದರು. ಪ್ರಾಧ್ಯಾಪಕ ರಾಜೇಂದ್ರ ನಿರೂಪಿಸಿ, ವಂದಿಸಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.